ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗೂ ಭಾರಿ ಮಳೆಯ ಯೆಲ್ಲೋ ಅಲರ್ಟ್ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ.
ಅಕ್ಟೋಬರ್ 28ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ (30-40 ಕಿ.ಮೀ) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರಲ್ಲಿ ಮುಂದಿನ 48 ಗಂಟೆಗಳಲ್ಲಿ ಕೂಡಾ ಭಾಗಶಃ ಮೋಡ ಕವಿದ ವಾತಾವರಣ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. .


ನಿಮ್ಮ ಕಾಮೆಂಟ್ ಬರೆಯಿರಿ