ಪತ್ನಿ ಜೊತೆ ಜಗಳದ ನಂತರ ಅವಳಿ ಮಕ್ಕಳನ್ನು ಬರ್ಬರವಾಗಿ ಕೊಲೆಗೈದ ತಂದೆ…!

ವಾಶಿಮ್: ದಂಪತಿಯ ಕಲಹಕ್ಕೆ ಪುಟ್ಟ ಕಂದಮ್ಮಗಳಿಬ್ಬರು ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪತ್ನಿಯೊಂದಿಗೆ ಜಗಳವಾಡಿದ ಬಳಿಕ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದ ವ್ಯಕ್ತಿ ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗತನಾಗಿದ್ದಾನೆ.
ಮಕ್ಕಳಿಬ್ಬರನ್ನು ಕೊಂದ ಬಳಿಕ ಆರೋಪಿ ಕಾರು ಚಲಾಯಿಸಿಕೊಂಡು ಪೊಲೀಸ್ ಠಾಣೆಗೆ ಕಾರು ಹೋಗಿದ್ದು, ಅಲ್ಲಿ ತಾನು ತನ್ನ ಹೆಣ್ಣು ಮಕ್ಕಳಿಬ್ಬರನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ. ವಾಶಿಮ್ ಜಿಲ್ಲೆಯ (Washim district) ನಿವಾಸಿ ರಾಹುಲ್ ಚವಾಣ ಮಕ್ಕಳಿಬ್ಬರನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ ತನ್ನ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ಎರಡು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ರಾಹುಲ್ ಚವಾಣ ಶುಕ್ರವಾರ ಪತ್ನಿ ಮತ್ತು ಹೆಣ್ಣುಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ. ಈ ವೇಳೆ ದಂಪತಿಯ ಮಧ್ಯೆ ಜಗಳ ನಡೆದಿದೆ. ವಾಗ್ವಾದದ ಸಮಯದಲ್ಲಿ ಅದು ವಿಕೋಪಕ್ಕೆ ಹೋಗಿ ಪತ್ನಿ ತನ್ನ ತವರು ಮನೆಗೆ ತೆರಳಲು ನಿರ್ಧರಿಸಿದಳು. ಆದರೆ ರಾಹುಲ್ ತನ್ನ ಮಕ್ಕಳೊಂದಿಗೆ ಪ್ರಯಾಣ ಮುಂದುವರಿಸಿದರು.
ಕೋಪದಲ್ಲಿದ್ದ ರಾಹುಲ್ ಚವಾಣ್ ಬುಲ್ಧಾನಾ ಜಿಲ್ಲೆಯ ಅಂಚಾರ್ವಾಡಿ ಗ್ರಾಮದ ಬಳಿಯ ಅರಣ್ಯ ಪ್ರದೇಶಕ್ಕೆ ಕಾರು ಚಲಾಯಿಸಿಕೊಂಡು ಹೋಗಿ ಅಲ್ಲಿ ತನ್ನ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿದ್ದಾನೆ. ನಂತರ ವಾಶಿಮ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಹೆಣ್ಣು ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.
ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮಕ್ಕಳ ದೇಹಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಾಥಮಿಕ ತನಿಖೆ ಪ್ರಕಾರ ಶವಗಳು ಭಾಗಶಃ ಸುಟ್ಟುಹೋಗಿವೆ. ರಾಹುಲ್ ಚವಾಣ್ ಮಕ್ಕಳನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯಗಳನ್ನು ಬೆಂಕಿ ಹಚ್ಚಿ ನಾಶಮಾಡಲು ಪ್ರಯತ್ನಿಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಪೊಲೀಸರು ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿ, ಹತ್ಯೆಗೆ ಕಾರಣವಾದ ಘಟನೆಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement