ಮೊಂತಾ ಚಂಡಮಾರುತ ; ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ-ಮಳೆ ಸಾಧ್ಯತೆ

ಬೆಂಗಳೂರು : ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್‌ 30ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅಕರಾವಳಿಯಲ್ಲಿ ಗಂಟೆಗೆ ಸರಾಸರಿ 35 -45 ಕಿಮೀಯಿಂದ ಗರಿಷ್ಠ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್‌ 31ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಹಾಗೆಯೇ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement