ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ.
ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಜಟಾಪಟಿ ನಡೆದಿದೆ. ಪ್ರತಿಯೊಬ್ಬ ಆಕಾಂಕ್ಷಿ ಲಾಬಿ ನಡೆಸುತ್ತಿದ್ದಾರೆ. ಬೆಂಬಲಿಗರು ಸಹ ಅವರ ಪರವಾಗಿ ಲಾಬಿ ನಡೆಸುತ್ತಿದ್ದಾರೆ. ಚಿತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಣಿಸುತ್ತಿಲ್ಲ ಆದರೆ ರಾಜ್ಯದ ಸಾರಥ್ಯ ಖರ್ಗೆಗೆ ಸಿಗಲಿದೆ ಎಂದು ಅವರು ಭವಿಷ್ಯ ನುಡಿದರು.
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬೇಕೆಂದು ಕಾಯುತ್ತಿದ್ದಾರೆ. ಖರ್ಗೆ ಅವರ ಹೆಸರು ಬಂದಾಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಇತರರು ಸ್ಪರ್ಧೆಯಿಂದ ಹೊರಗೆ ಉಳಿಯಲಿದ್ದಾರೆ ಎಂದು ಅವರು ಹೇಳಿದರು.


ನಿಮ್ಮ ಕಾಮೆಂಟ್ ಬರೆಯಿರಿ