ಡಾ. ರಾಜ​​ಕುಮಾರ, ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ ಪ್ರಶಸ್ತಿ ಘೋಷಣೆ

ಬೆಂಗಳೂರು : ಕರ್ನಾಟಕ ಸರ್ಕಾರ ನೀಡುವ ಡಾ ರಾಜಕುಮಾರ ಪ್ರಶಸ್ತಿ, ವಿಷ್ಣುವರ್ಧನ್ ಪ್ರಶಸ್ತಿ ಮತ್ತು ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಗುರುವಾರ (ಅಕ್ಟೋಬರ್‌ ೩೦) ಘೋಷಿಸಲಾಗಿದೆ.
ಹಿರಿಯ ನಟಿ ಉಮಾಶ್ರೀ ಅವರಿಗೆ ಡಾ ರಾಜಕುಮಾರ ಪ್ರಶಸ್ತಿಯನ್ನು ನೀಡಲಾಗಿದೆ. 2019ನೇ ಸಾಲಿನ ಡಾ ರಾಜ​​ಕುಮಾರ ಪ್ರಶಸ್ತಿ ಇದಾಗಿದೆ. ಉಮಾಶ್ರೀ ಅವರು ಇಷ್ಟು ವರ್ಷ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ, ಅವರ ಅತ್ಯುತ್ತಮ ನಟನೆಯನ್ನು ಗುರುತಿಸಿ ಅವರನ್ನು ರಾಜ​ಕುಮಾರ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ವಿಷ್ಣುವರ್ಧನ್ ಪ್ರಶಸ್ತಿಗೆ ಹಿರಿಯ ನಟ ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ಕನ್ನಡ, ತುಳು, ಕೊಂಕಣಿ ಸಿನಿಮಾಗಳಲ್ಲಿ ವರ್ಷಗಳ ಕಾಲ ನಟನೆಯನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್​​ಆರ್ ನಂಜುಂಡೇ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ಐದು ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕವನ್ನು ಸಹ ಒಳಗೊಂಡಿವೆ.
ಈ ಪ್ರಶಸ್ತಿಗಳ ಜೊತೆಗೆ ಬೆಳ್ಳಿ ತೊರೆಗೆ ಉತ್ತಮ ಸಿನಿಮಾ ಪ್ರಬಂಧ ಮತ್ತು ‘ಗುಳೆ’ ಸಿನಿಮಾಕ್ಕೆ ಉತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಈ ಪ್ರಶಸ್ತಿಗಳು 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಬೆಳ್ಳಿ ಪದಕಗಳನ್ನು ಒಳಗೊಂಡಿವೆ.

ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement