ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಈ ಹಿಂದೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ನಡೆಯುವ ಎಲ್ಲ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ