ಮುರುಡೇಶ್ವರ : ವ್ಯಕ್ತಿ ಮೇಲೆ ಹಲ್ಲೆ ನಡೆಸಿ ₹ 1 ಲಕ್ಷ ಮೌಲ್ಯದ ಚಿನ್ನದ ಸರ ದೋಚಿದ ತೃತೀಯಲಿಂಗಿಗಳು…

ಭಟ್ಕಳ : ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮಾವಳ್ಳಿ ನಿವಾಸಿ, ಆರ್.ಎನ್.ಎಸ್. ಡಿಪ್ಲೋಮಾ ಕಾಲೇಜಿನಲ್ಲಿ ಕೆಲಸ ಮಾಡುತ್ತಿರುವ ಅರುಣಕುಮಾರ ಭಾಸ್ಕರ ನಾಯ್ಕ ಎಂಬವರು ಈ ಸಂಬಂಧ ದೂರು ನೀಡಿದ್ದಾರೆ.
ರವಿವಾರರಂದು ರಾತ್ರಿ ಸುಮಾರು 10:30 ಗಂಟೆಯ ಸಮಯದಲ್ಲಿ ಅರುಣಕುಮಾರ ತಮ್ಮ ಸ್ಕೂಟಿಗೆ ಪೆಟ್ರೋಲ್ ಖಾಲಿಯಾಗಿದ್ದರಿಂದ, ಪೆಟ್ರೋಲ್ ತುಂಬಿಸಿಕೊಂಡು ರಾಷ್ಟ್ರೀಯ ಹೆದ್ದಾರಿ-66ರ ಸರ್ವೀಸ್ ರಸ್ತೆಯಲ್ಲಿ ಮುರ್ಡೇಶ್ವರ ರೈಲ್ವೇ ನಿಲ್ದಾಣದ ಬಳಿ ಬರುತ್ತಿದ್ದರು.
ಈ ವೇಳೆ ಇಬ್ಬರು ಮಂಗಳಮುಖಿಯರು ಕೈ ಮಾಡಿ ಅವರ ಗಾಡಿಯನ್ನು ನಿಲ್ಲಿಸಿದ್ದಾರೆ. ಅಷ್ಟರಲ್ಲಿ ರೈಲ್ವೇ ನಿಲ್ದಾಣದ ಕಡೆಯಿಂದ ಬಂದ ಮತ್ತೆ ಇಬ್ಬರು ಮಂಗಳಮುಖಿಯರು ಸೇರಿಕೊಂಡು, ಏಕಾಏಕಿ ಅರುಣ ಅವರ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾರೆ.
ನಂತರ ಅವರ ಕುತ್ತಿಗೆಗೆ ಕೈಹಾಕಿ, ಅವರ ಕುತ್ತಿಗೆಯಲ್ಲಿದ್ದ ಸುಮಾರು 15 ಗ್ರಾಂ ತೂಕದ, 1 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಅವರು ತಕ್ಷಣ ಮುರುಡೇಶ್ವರ ಪೊಲೀಸ್ ಠಾಣೆಗೆ ತೆರಳಿ ಔಪಚಾರಿಕ ದೂರು ದಾಖಲಿಸಿದ್ದಾರೆ. ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement