ಕಾರವಾರ: ಮಂಗಳವಾರ ಬೆಳಿಗ್ಗೆ ಸಂಭವಿಸಿದ ಟ್ರ್ಯಾಕ್ಟರ್-ಸ್ಕೂಟರ್ ಮುಖಾಮುಖು ಡಿಕ್ಕಿಯಲ್ಲಿ ದಾಂಡೇಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಸ್ಥಳೀಯ ನಗರ ಸಭೆ ಹಾಲಿ ಸದಸ್ಯ ಮೋಹನ ಹಲವಾಯಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ನಗರದ ಮುಖ್ಯ ಅಂಚೆ ಕಚೇರಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಮೋಹನ ಹಲವಾಯಿ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಟ್ರ್ಯಾಕ್ಟರ್ ವಿರುದ್ಧ ದಿಕ್ಕಿನಿಂದ ಬಂದು ಅವರಿಗೆ ಡಿಕ್ಕಿ ಹೊಡೆದಿದ್ದು, ನಂತರ ಟ್ರ್ಯಾಕ್ಟರ್ ಎದುರಿಗಿದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅವರ ತಲೆ ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ತಕ್ಷಣವೇ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು, ನಂತರ ಅವರನ್ನು ಧಾರವಾಡ ಸತ್ತೂರಿನ ಎಸ್ಡಿಎಂ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ.
ಧಾರವಾಡ ಸತ್ತೂರಿನ ಎಸ್ಡಿಎಂ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ವರದಿಯಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ