ಹುಬ್ಬಳ್ಳಿ : ಭವರಲಾಲ ಜೈನಗೆ ಧೀಮಂತ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಕೊಡಮಾಡುವ ಪ್ರತಿಷ್ಠಿತ ಧೀಮಂತ ಪ್ರಶಸ್ತಿಯನ್ನುಹುಬ್ಬಳ್ಳಿಯ ಶ್ರೀ ಜೈನ್‌ ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚೇರ್ಮನ್ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಭವರಲಾಲ ಸಿ. ಜೈನ್ ಅವರಿಗೆ ನೀಡಿ ಗೌರವಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ, ಭವರಲಾಲ ಸಿ. ಜೈನ್ ಅವರ ಸಮಾಜಮುಖಿ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಅವರಿಗೆ ‘ವಿಶೇಷ ಸಾಧಕರ’ ವಿಭಾಗದಲ್ಲಿ ಧೀಮಂತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯ ಮೇಲೆ ಶಾಸಕ ಮಹೇಶ ತೆಂಗಿನಕಾಯಿ, ಮಹಾಪೌರರಾದ ಜ್ಯೋತಿ ಪಾಟೀಲ, ಉಪಮಹಾಪೌರ ಸಂತೋಷ ಚವ್ಹಾಣ ಇದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement