ಎಸ್ ​ಎಸ್ ​ಎಲ್ ​​ಸಿ, ದ್ವಿತೀಯ ಪಿಯು ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ (ನವೆಂಬರ್ 5) ಪ್ರಕಟಿಸಿದೆ.
ಎಸ್​​ಎಸ್​ಎಲ್​ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದೆ. ಮೇ 18ರಿಂದ ಮೇ 25ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಪಿಯುಸಿ ಪರೀಕ್ಷೆ-2 ಏಪ್ರಿಲ್ 25ರಿಂದ ಮೇ9ರ ವರೆಗೂ ನಡೆಯಲಿವೆ.
2026ನೇ ಸಾಲಿನ ಎಸ್​ಎಸ್​ಎಲ್​​ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ನವೆಂಬರ್ 5ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್​​) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ-1 ವೇಳಾಪಟ್ಟಿ
ಮಾ.18 – ಪ್ರಥಮ ಭಾಷೆ
ಮಾ.23 – ವಿಜ್ಞಾನ
ಮಾ.25 – ದ್ವೀತಿಯ ಭಾಷೆ
ಮಾ.28 – ಗಣಿತ
ಮಾ.30 – ತೃತೀಯ ಭಾಷೆ
ಏ.2 – ಸಮಾಜ ವಿಜ್ಞಾನ
ಎಸ್​ಎಸ್​ಎಲ್​ಸಿ ಪರೀಕ್ಷೆ 2 ವೇಳಾಪಟ್ಟಿ
ಮೇ 18 – ಪ್ರಥಮ ಭಾಷೆ
ಮೇ 19 – ವಿಜ್ಞಾನ
ಮೇ 20 – ದ್ವೀತಿಯ ಭಾಷೆ
ಮೇ 21 – ಗಣಿತ
ಮೇ 22 – ತೃತೀಯ ಭಾಷೆ
ಮೇ 23 – ಸಮಾಜ ವಿಜ್ಞಾನ

ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ದ್ವಿತೀಯ ಪಿಯು ಪರೀಕ್ಷೆ 1 ರ ವೇಳಾಪಟ್ಟಿ
28-2-2026- ಕನ್ನಡ, ಅರಬಿಕ್
2-3-26-ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ.
3-3-26- ಇಂಗ್ಲೀಷ್
4-3-26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
5 -3-26- ಇತಿಹಾಸ
6-3-26-ಭೌತಶಾಸ್ತ್ರ
7-3-26-ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
9-3-26- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ.
10-3-26- ಅರ್ಥಶಾಸ್ತ್ರ.
11-3-26- ತರ್ಕಶಾಸತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ.
12-3-26-ಹಿಂದಿ.
13-3-26-ರಾಜ್ಯಶಾಸ್ತ್ರ.
14-3-26- ಲೆಕ್ಕಶಾಸ್ತ್ರ, ಗಣಿತ,
16-3-26- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ.
17-3-26- ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್​ನೆಸ್​​.

ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ
ಏಪ್ರಿಲ್ 25-2026: ಕನ್ನಡ, ಅರಬಿಕ್
ಏಪ್ರಿಲ್ 27-2026: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
ಏಪ್ರಿಲ್ 28-2026: ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಏಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
ಏಪ್ರಿಲ್ 30: ಅರ್ಥಶಾಸ್ತ್ರ
ಮೇ 2: ಇತಿಹಾಸ, ರಸಾಯನಶಾಸ್ತ್ರ
ಮೇ 4: ಇಂಗ್ಲಿಷ್
ಮೇ 5: ಹಿಂದಿ
ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ.
ಮೇ 7– ಸಮಾಜ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 8– ಮನಶಾಸ್ತ್ರ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ
ಮೇ 9– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು. ಸಂಸ್ಕೃತ, ಫ್ರೆಂಚ್.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement