ವೀಡಿಯೊ..| ಕಾರವಾರ : ಇದ್ದಕ್ಕಿದ್ದಂತೆ ಹೊತ್ತಿ ಉರಿದ ಗೂಡ್ಸ್‌ ಟೆಂಪೊ

ಕಾರವಾರ: ಗೂಡ್ಸ್ ಟೆಂಪೋ ವಾಹನಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರ ನಗರದ ನಗರದ ಬಿಲ್ಟ್ ಸರ್ಕಲ್ ಬಳಿ ನಿಂತಿದ್ದ ಗೂಡ್ಸ್ ವಾಹನ ಬೆಂಕಿಹೊತ್ತಿಕೊಂಡ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಚಾಲಕ ವಾಹನದಲ್ಲಿ ಇರಲಿಲ್ಲ, ನಿಲ್ಲಿಸಿಟ್ಟ ವಾಹನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿಯ ಜ್ವಾಲೆಗೆ ವಾಹನದ ಮುಂಭಾಗವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ, ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೀರು ಮತ್ತು ಮರಳನ್ನು ಬಳಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಹಾಗೂ ತಕ್ಷಣವೇ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ವಾಹನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕ್ಷಣ ಕಾಲ ಆಂತಕದ ವಾತಾವರಣ ಸೃಷ್ಟಿಸಿತು. ಬೆಂಕಿ ಹೊತ್ತಿಕೊಂಡಿದ್ದರ ಬಗ್ಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ಕಾರಣ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement