ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ ಮಾಡಿರುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದೆ.

ಹೆಚ್ಚಿನ ಭದ್ರತಾ ವಲಯದಲ್ಲಿ ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ. ಪಕ್ಷದ ವಕ್ತಾರ ವಿಜಯ ಪ್ರಸಾದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಈ ಘಟನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ.
“ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದೆ. ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ?  ಎಂದು ಪ್ರಶ್ನಿಸಿದೆ.

ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರವೂ ಆರ್‌ಎಸ್‌ಎಸ್ ಪಥಸಂಚಲನ ನಡೆಸಿದಾಗ ರಾಜ್ಯ ಸರ್ಕಾರ ಆಕ್ಷೇಪಿಸುತ್ತದೆ. ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆಯವರೇ ನೀವು ಇಸನ್ನು ಅನುಮೋದಿಸುತ್ತೀರಾ ಎಂದು ಅವರು ಭಾನುವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement