ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದ ಹಲವಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ಶವಗಳನ್ನು ಹೂತಿರುವ ಪ್ರಕರಣದ ಎಫ್ಐಆರ್ನಲ್ಲಿ ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ ಮಟ್ಟಣ್ಣನವರ್, ಮಹೇಶ ಶೆಟ್ಟಿ ತಿಮರೋಡಿ, ಟಿ ಜಯಂತ ಮತ್ತು ವಿಠ್ಠಲ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. “ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿಲಾಗಿದ್ದು, ಅರ್ಜಿಯನ್ನು ವಿಚಾರಣಾರ್ಹತೆಯ ಆಧಾರದಲ್ಲಿ ಆಲಿಸಲಾಗುವುದು” ಎಂದ ನ್ಯಾಯಾಲಯ ನವೆಂಬರ್ 28ಕ್ಕೆ ವಿಚಾರಣೆಯನ್ನು ಮುಂದೂಡಿತು ಎಂದು ವರದಿ ಹೇಳಿದೆ.
ತನಿಖೆಗೆ ತಡೆ ನೀಡಿದ್ದನ್ನು ಹೈಕೋರ್ಟ್ ತೆರವುಗೊಳಿಸಿರುವುದರಿಂದಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿರುವ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್ಗೌಡ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ