
ಮುಂಬೈ: ಬಾಲಿವುಡ್ನ ಹಿರಿಯ ನಟ ಗೋವಿಂದ ಅವರು ಮಂಗಳವಾರ ರಾತ್ರಿ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ನಂತರ, ಮುಂಬೈನ ಜುಹುವಿನಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 61 ವರ್ಷದ ನಟ ಗೋವಿಂದ ಅವರು ಗೊಂದಲ (disorientation)ದಿಂದಾಗಿ ತಡರಾತ್ರಿ ತಮ್ಮ ಮನೆಯಲ್ಲಿ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ಅವರು ಎನ್ಡಿಟಿವಿಗೆ ತಿಳಿಸಿದ್ದಾರೆ.
ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ

. ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳ ವರದಿ ಇನ್ನಷ್ಟೇ ಬರಬೇಕಿದೆ. ಗೋವಿಂದ ಪ್ರಜ್ಞೆತಪ್ಪಲು ಕಾರಣ ಇನ್ನೂ ಬಹಿರಂಗವಾಗಿಲ್ಲ. ಪರೀಕ್ಷಾ ವರದಿ ಬಂದ ಬಳಿಕ ಈ ವಿಚಾರ ರಿವೀಲ್ ಆಗಲಿದೆ.
ಕಳೆದ ವರ್ಷದ ಘಟನೆ ನೆನಪು
ಕಳೆದ ವರ್ಷ ಅಕ್ಟೋಬರ್ನಲ್ಲಿ, ಗೋವಿಂದ ಅವರು ತಮ್ಮ ಪರವಾನಗಿ ಪಡೆದ ರಿವಾಲ್ವರ್ ಆಕಸ್ಮಿಕವಾಗಿ ಮಿಸ್ಫೈರ್ ಆದ ಕಾರಣ ಕಾಲಿಗೆ ಗುಂಡಿನ ಗಾಯ ಮಾಡಿಕೊಂಡಿದ್ದರು. ಆಗಲೂ ಅವರನ್ನು ಜುಹು ಸಮೀಪದ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಒಂದು ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಗುಂಡನ್ನು ಹೊರ ತೆಗೆಯಲಾಗಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ