ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (B.M. Parvathi) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಅವರನ್ನು ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು. ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸದ್ಯ ಆಸ್ಪತ್ರೆಯಲ್ಲಿ ಇದ್ದು, ಮೋದಿ ಮತ್ತು ಖರ್ಗೆಯವರನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು, ವಿಷಯ ತಿಳಿದು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.


ನಿಮ್ಮ ಕಾಮೆಂಟ್ ಬರೆಯಿರಿ