ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ; 5 ಜಿಲ್ಲೆಗಳಿಗೆ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ, ಮುಂದಿನ ಒಂದು ವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತೀವ್ರ ಶೀತಗಾಳಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಉತ್ತರ ಕರ್ನಾಟಕಕ್ಕೆ ವಿಶೇಷ ಎಚ್ಚರಿಕೆ ನೀಡಿದ್ದು, ಮುಂದಿನ 2 ದಿನಗಳ ಕಾಲ ಬೀದರ, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ (Cold wave) ಪರಿಸ್ಥಿತಿ ಇರಲಿದೆ ಎಂದು ತಿಳಿಸಿದೆ. ಈ ಭಾಗದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ 7.6 ಕಿ.ಮೀ. ಎತ್ತರದವರೆಗೂ ಮೇಲ್ಮೈ ಸುಳಿಗಾಳಿ ವ್ಯಾಪಿಸಿದೆ. ಇದು ಮುಂದಿನ 24 ಗಂಟೆಗಳಲ್ಲಿ ನಿಧಾನವಾಗಿ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ.

6 ದಿನಗಳ ಹವಾಮಾನ ವರದಿ
ನ.18ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.
ನ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಣ ಹವೆ ಮುಂದುವರಿಯಲಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ನ.20ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ನ.21ರಂದು ಕೂಡ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.  ನವೆಂಬರ್ 22 ಮತ್ತು 23: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಣಹವೆ ಇರುವ ಸಾಧ್ಯತೆ ಇದೆ. ‌

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement