ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ ತಿಂಗಳು ಚಳಿಗಾಲವಾಗಿದ್ದರೂ ನ.21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.
ನ.22ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನ.23ರಂದು ಉತ್ತರ ಕನ್ನಡ , ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನ.24ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಮಂಗಳೂರು : ಬಾಲಕರಿಗೆ ಲೈಂಗಿಕ ಕಿರುಕುಳದ ಆರೋಪ: ಚರ್ಚ್‌ ಪಾದ್ರಿ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement