ಮದುವೆ ದಿನವೇ ಅಪಘಾತ, ಗಾಯಗೊಂಡ ಮದುಮಗಳಿಗೆ ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ಮದುಮಗ…

ಕೊಚ್ಚಿ: ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಮದುವೆಯ ದಿನ ವರ ತಾಳಿ ಕಟ್ಟಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಮದುವೆ ದಿನ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಧು ಅವನಿ ಅಪಘಾತದಿಂದ ಗಾಯಗೊಂಡರು. ಆರಂಭದಲ್ಲಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅವರನ್ನು ಕರೆತರಲಾಯಿತು, ನಂತರ ಅವರನ್ನು ವಿಶೇಷ ಚಿಕಿತ್ಸೆಗಾಗಿ ಕೊಚ್ಚಿಯ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆನ್ನುಮೂಳೆಯ ಗಾಯದಿಂದ ತೀವ್ರವಾದ ನೋವಿನ ಹೊರತಾಗಿಯೂ, ಅವನಿ ಮತ್ತು ವರ ಶರೋನ್ ಅವರ ಮದುವೆ ನೇರವೇರಿದೆ. ಆಸ್ಪತ್ರೆಯೊಳಗೆ ವಿವಾಹ ನಡೆದಿದೆ. ಅವನಿ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಲಗಿದ್ದಾಗಲೇ ಆಕೆಯ ಕುತ್ತಿಗೆಗೆ ಶರೋನ್ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಇದಕ್ಕೆ ಸಾಕ್ಷಿಯಾದರು.
ಮಧ್ಯಾಹ್ನ 12:15 ರಿಂದ 12:30 ರ ನಡುವೆ ಮದುವೆ ನಡೆದಿದೆ. ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಸಮಾರಂಭದ ನಂತರ, ಅವನಿಯನ್ನು ಐಸಿಯುಗೆ ಸ್ಥಳಾಂತರಿಸಲಾಯಿತು

ಪ್ರಮುಖ ಸುದ್ದಿ :-   ವಿದೇಶ ಪ್ರವಾಸ, ವಿದೇಶದಲ್ಲಿ ಮದುವೆ ಬೇಡ, ಚಿನ್ನ ಖರೀದಿ ತಗ್ಗಿಸಿ : ದಾಖಲೆ ಆರ್ಥಿಕ ಬೆಳವಣಿಗೆ ನಡುವೆ ಮೋದಿ ಸ್ವದೇಶಿ ಮಂತ್ರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement