ಬೆಂಗಳೂರು | ವಂದೇ ಭಾರತ್ ರೈಲು ಡಿಕ್ಕಿ ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಯುವ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಕೇರಳ ಮೂಲದ ಜಸ್ಟಿನ್ ಜೋಸೆಫ್ (21) ಮತ್ತು ಸ್ಟೆರಿನ್ ಎಲ್ಜಾ ಸಾಜಿ (19) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಈ ಇಬ್ಬರು ವಿದ್ಯಾರ್ಥಿಗಳು ರೈಲು ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಅವರು ಕೇರಳದ ಪತ್ತನಂತಿಟ್ಟ ನಿವಾಸಿಗಳಾಗಿದ್ದು, ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್ಸಿ. ನರ್ಸಿಂಗ್ ಎರಡನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದರು. ಹಾಗೂ ಹತ್ತಿರದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳು ತಮ್ಮ ಪಿಜಿಗೆ ಹಿಂತಿರುಗುವಾಗ ರೈಲ್ವೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ. ವಂದೇ ಭಾರತ ರೈಲು ಅತಿ ವೇಗದಲ್ಲಿ ಸಮೀಪಿಸುತ್ತಿದ್ದಾಗ ಇಬ್ಬರೂ ಹಳಿಗಳ ಮೇಲೆ ಬಂದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ತನಿಖಾಧಿಕಾರಿಗಳು ಅಪಘಾತದ ಸಾಧ್ಯತೆಯನ್ನು ಶಂಕಿಸಿದ್ದಾರೆ ಆದರೆ ಆತ್ಮಹತ್ಯೆಯನ್ನು ತಳ್ಳಿಹಾಕಿಲ್ಲ ಮತ್ತು ಎರಡೂ ಕೋನಗಳನ್ನು ಪರಿಶೀಲಿಸುತ್ತಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಚಿಕ್ಕಬಾಣಾವರ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಎಲ್ಲ ವಿವರಗಳನ್ನು ಪರಿಶೀಲಿಸಿದ ನಂತರ ಮೃತರ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲು ಅತ್ಯಂತ ವೇಗದಲ್ಲಿ ಬರುತ್ತಿದ್ದಾಗ ವಿದ್ಯಾರ್ಥಿಗಳು ಹಳಿ ದಾಟಲು ಪ್ರಯತ್ನಿಸಿದ್ದಾರೆ. ಆದರೆ, ಅವರಿಗೆ ಹಳಿಯಿಂದ ಹೊರಬರಲು ಸಾಧ್ಯವಾಗದೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement