ಭಾರತದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ ಅವರು ಸೋಮವಾರ ಭಾರತದ ೫೩ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನಂತರ ಈ ಹುದ್ದೆಯನ್ನು ವಹಿಸಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ ಅವರು ಸುಮಾರು ೧೫ ತಿಂಗಳುಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಫೆಬ್ರವರಿ ೯, ೨೦೨೭ ರಂದು ನಿವೃತ್ತರಾಗಲಿದ್ದಾರೆ. ಅವರು ಫೆಬ್ರವರಿ ೧೦, ೧೯೬೨ ರಂದು ಹರಿಯಾಣದ ಹಿಸಾರ್‌ನಲ್ಲಿ ಒಂದು ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು.

ಅವರು ೧೯೮೧ ರಲ್ಲಿ ಹಿಸಾರ್‌ನ ಸರ್ಕಾರಿ ಸ್ನಾತಕೋತ್ತರ ಕಾಲೇಜಿನಿಂದ ಪದವಿ ಪಡೆದರು ಮತ್ತು ೧೯೮೪ ರಲ್ಲಿ ರೋಹತಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ  ಎಲ್‌ಎಲ್‌ಬಿ ಪಡೆದರು.
೧೯೮೪ ರಲ್ಲಿ ಹಿಸಾರ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಕಾನೂನು ಪ್ರಾಕ್ಟೀಸ್‌ ಪ್ರಾರಂಭಿಸಿ, ನಂತರ ೧೯೮೫ ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ಮಾಡಲು ಚಂಡೀಗಢಕ್ಕೆ ಸ್ಥಳಾಂತರಗೊಂಡರು. ೨೦೦೦ನೇ ಇಸವಿಯಲ್ಲಿ ಅವರು ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
೨೦೧೮ ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ೨೦೧೯ ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement