ಕಾರವಾರ : ನಗರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಆಯೋಜಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಡಿಸೆಂಬರ್ 22 ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಸಚಿವರು, ಜಿಲ್ಲೆಯ ಎಲ್ಲ ಶಾಸಕರು ಮತ್ತು ಎಲ್ಲಾ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಡಿಸೆಂಬರ್ 22 ರಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡ, ಕ್ರಿಮ್ಸ್ ಆಸ್ಪತ್ರೆ ಕಟ್ಟಡ, ಮಂಜುಗುಣಿ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಕರಾವಳಿ ಉತ್ಸವದಲ್ಲಿ ಪ್ರತಿ ದಿನ ಸಂಜೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೂ ಮುನ್ನ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಬೆಳಗಿನ ಅವಧಿಯಲ್ಲಿ ರಂಗೋಲಿ ಸ್ಪರ್ಧೇ, ಮ್ಯಾರಥಾನ್, ಅಡುಗೆ ಸ್ಪರ್ಧೆ, ಶ್ವಾನ ಪ್ರದರ್ಶನ, ಗಾಳಿಪಟ ಉತ್ಸವ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಎಲ್ಲಾ ಕಾರ್ಯಕ್ರಮಗಳ ಕುರಿತ ಸಂಪೂರ್ಣ ವಿವರಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ