ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ ಅವರಿಗೆ ಸ್ವಾಗತ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಉಡುಪಿಗೆ ಆಗಮಿಸಿದರು. ಮೋದಿಯವರನ್ನು ನೋಡಲು ಸಾವಿರಾರು ಜನ ಸೇರಿದ್ದಾರೆ.
ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ನಂತರ ಉಡುಪಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದರು. ಉಡುಪಿಯಲ್ಲಿ ಅವರನ್ನು ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಸ್ವಾಗತಿಸಿದರು.
ಉಡುಪಿ ಹೆಲಿಪ್ಯಾಡ್ನಿಂದ ಪ್ರಧಾನಿ ಮೋದಿ ಆದಿ ಉಡುಪಿಯಿಂದ ಭವ್ಯ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠದ ಕಡೆಗೆ ತೆರಳಿ, ಬನ್ನಂಜೆ, ಉಡುಪಿ ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮೂಲಕ ಹಾದು ಅಂತಿಮವಾಗಿ ಶ್ರೀ ಕೃಷ್ಣ ಮಠ ತಲುಪಿದರು.
ಯಕ್ಷಗಾನ, ಹುಲಿ ನೃತ್ಯ (ಪಿಲಿ ವೇಷ) ಸೇರಿದಂತೆ ತುಳುನಾಡಿನ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳು ಮತ್ತು ಶ್ರೀಕೃಷ್ಣನ ವೇಷ ಧರಿಸಿದ ಕಲಾವಿದರಿಂದ ಅದ್ಧೂರಿ ಸ್ವಾಗತ ನೀಡಲಾಯಿತು.
ಬಳಿಕ ಅವರು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯುವ ಹಾಗೂ ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸುವ ಕಾರ್ಯಕ್ರಮ ಇದೆ. ಬಳಿಕ ಪ್ರಧಾನಮಂತ್ರಿ ಮೋದಿ ಅವರು ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಐತಿಹಾಸಿಕ ಲಕ್ಷ ಕಾಂತ ಗೀತಾ ಪಾರಾಯಣ, ಸಾಮೂಹಿಕ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿರುವ ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ