ದಿತ್ವಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಶ್ರೀಲಂಕಾದ ಕರಾವಳಿ ಮತ್ತು ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯ ಮೇಲಿರುವ ‘ದಿತ್ವಾ’ (Ditwah) ಚಂಡಮಾರುತವು ಈ ಚಂಡಮಾರುತವು ನವೆಂಬರ್ 30 ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು  ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನಲ್ಲಿ ನವೆಂಬರ್ 30 ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ ನವೆಂಬರ್ 29 ಮತ್ತು 30 ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇದರಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿಯ ವಾತಾವರಣ ಉಂಟಾಗಿದೆ.  ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನವೆಂಬರ್ 29ರಂದು ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ಗ್ರಾಮಾಂತರ) ಮತ್ತು ಬೆಂಗಳೂರು (ನಗರ) ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ನವೆಂಬರ್ 30ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ  ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಬೆಂಗಳೂರು (ಗ್ರಾಮಾಂತರ/ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಸಾಧ್ಯತೆ.
ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಡಿಸೆಂಬರ್ 1ರಂದು ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡು: ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಡಿಸೆಂಬರ್ 02ರಂದು ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮಾಂತರ/ನಗರ) ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement