ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಒಯ್ಯಲಾಗಿದೆ. ಮೈಸೂರಿನ (Mysuru) ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳು ಮುರುಡೇಶ್ವರ ಹಾಗೂ ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್‌ ಸುಳೆ ಮುರ್ಕಿ ಕ್ರಾಸ್ ಬಳಿಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement