ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ.3ರಿಂದ ಎರಡ್ಮೂರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬುಧವಾರ (ಡಿ.3) ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್‌ 4ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಹಾಸನ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್‌ 5ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement