ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.
ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅವರಿಗೆ ​​ ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
 ಕಳೆದ ವಾರ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದರು.
ಇತ್ತೀಚೆಗಷ್ಟೆ, ನಡೆದ ಭೀಕರ ಕಾರು ಅಫಘಾತವೊಂದರಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟಿದ್ದರು. ಇದು ಮಾಸುವ ಮುನ್ನವೇ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement