ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ ಶಿವಸೇನೆ ಪುಂಡಾಟಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ.
ಇಂದು, ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಬೆಳಗಾವಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ನಡೆಸಲು ಮುಂದಾಗಿದ್ದರು. ಆದರೆ ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡಿಲ್ಲ.

ಇದನ್ನು ವಿರೋಧಿಸಿ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ವಾಯವ್ಯ ಕರ್ನಾಟಕ ಸಾರಿಗೆ ಬಸ್‌ಗೆ ʼಜೈ ಮಹಾರಾಷ್ಟ್ರʼ ಎಂದು ಸ್ಟೀಕರ್ ಅಂಟಿಸಿ, ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಕೊಲ್ಲಾಪುರ ಸೆಂಟ್ರಲ್ ಬಸ್ ಸ್ಟ್ಯಾಂಡ್‌ನಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಪ್ರದರ್ಶಿಸಿದ್ದು, ಠಾಕ್ರೆ ಬಣದ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಅಲ್ಲದೆ ಮಹಾರಾಷ್ಟ್ರದ ಕೆಲವು ನಾಯಕರು ಬೆಳಗಾವಿ ಜಿಲ್ಲೆ ಪ್ರವೇಶಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಬೆಳಗಾವಿಯಲ್ಲಿ ಮತ್ತು ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement