ಉತ್ತರ ಕನ್ನಡ ಜಿಲ್ಲೆ ಮೂಲದ ವಿಜ್ಞಾನಿ ಉದ್ಯಮಿ ಡಾ. ಶ್ರೀಹರಿ ಚಂದ್ರಘಾಟಗಿಗೆ ಜಪಾನಿನ ಉನ್ನತ ಪ್ರಶಸ್ತಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ  ಮೂಲದ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಕೈಗಾರಿಕೆಗಳ ಗುಣಮಟ್ಟ ಮತ್ತು ಸುಧಾರಣೆಗೆ ಕೊಡುಗೆ ನೀಡಿದ ಅಪ್ರತಿಮ ಸಾಧಕರನ್ನು ಗುರುತಿಸಿ ಪುರಸ್ಕರಿಸಲಾಗಿದೆ.
ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ, ಟೋಕಿಯೋ ವಾಣಿಜ್ಯ ಮತ್ತು ಕೈಗಾರಿಕಾ ಮಂಡಲಿ, ಜಪಾನ್ ಬಿಜಿನೆಸ್ ಒಕ್ಕೂಟ ಮತ್ತು ನಿಕ್ಕನ್ ಕೋಗ್ಯ ಮಾಧ್ಯಮ ಸಂಸ್ಥೆಯ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಡಾ. ಶ್ರೀಹರಿ ಚಂದ್ರಘಾಟಗಿಯವರು ಕಳೆದ ಎರಡುವರೆ ದಶಕಗಳಿಂದ ಜಪಾನಿನ ರಾಜಧಾನಿ ಟೋಕಿಯೋದಲ್ಲಿಯೇ ನೆಲೆಸಿ ಎಕೋಸೈಕಲ್ ಕಾರ್ಪೊರೇಷನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದು, ಈ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಮೈಕ್ರೋ ಬಯೋಲಜಿಸ್ಟ್ ಆಗಿ ಕೃಷಿ, ಜಲ ಸಂಪನ್ಮೂಲಗಳ ರಕ್ಷಣಾ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಲ್ಲದೇ ಕೈಗಾರಿಕಾ ಮಾಲಿನ್ಯಗಳನ್ನು ತಡೆಗಟ್ಟುವ ಸಂಶೋಧನೆ ನಡೆಸಿ ಅಮೂಲ್ಯ ಕೊಡುಗೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ಡಾ. ಶ್ರೀಹರಿಯವರು ಮಣ್ಣಿನ ಸೂಕ್ಷ್ಮ ಜೀವಶಾಸ್ತ್ರದಲ್ಲಿ ಅಪಾರ ಸಂಶೋಧನೆ ನಡೆಸಿದ್ದಲ್ಲದೆ, ತಾವು ಪಿಎಚ್. ಡಿ. ಅಧ್ಯಯನ ನಡೆಸುವಾಗ ಕೃಷಿ ಇಳುವರಿ ಹೆಚ್ಚಿಸುವಲ್ಲಿ ಗಿಡಗಳ ಬೇರಿನ ಮೇಲೆ ಸೂಕ್ಷ್ಮ ಜೀವಿಗಳ ಪ್ರಭಾವದ ಕುರಿತಾಗಿಯೂ ಹೆಚ್ಚಿನ ಬೆಳಕು ಚೆಲ್ಲಿದ್ದರು. ಅವರ ಎಕೊಸೈಕಲ್ ಸಂಸ್ಥೆಯ ಮೂಲಕ 2006 ರಿಂದಲೂ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲದ ಮಟ್ಟ ಹೆಚ್ಚಿಸುವ ಜೊತೆಗೆ ಅಂತರ್ಜಲದ ಮಾಲಿನ್ಯ ತಡೆಗಟ್ಟಲು ಹಲವು ನೂತನ ತಂತ್ರಜ್ಞಾನಗಳನ್ನು ಸಂಶೋಧಿಸಿದ್ದಾರೆ.
ಮಾಲಿನ್ಯ ಮಯವಾದ ನೀರಿನಲ್ಲಿ ಮಾರಕ ಸೂಕ್ಷ್ಮ ಜೀವಿಗಳನ್ನು ನಿಗ್ರಹಿಸಲು ಪರ್ಯಾಯ ಸೂಕ್ಷ್ಮಜೀವಿಗಳನ್ನು ಬಳಸುವ ತಂತ್ರಜ್ಞಾನದ ರೂವಾರಿಯಾಗಿರುವ ಶ್ರೀಹರಿ ಅವರು ಜಪಾನ್ ಸಚಿವಾಲಯದ ಪ್ರಶಸ್ತಿಯೂ ಒಳಗೊಂಡಂತೆ ಹಲವು ಪ್ರಮುಖ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement