
ಬೆಂಗಳೂರು : ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿನಲ್ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸತ್ರ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯರು ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸಂತ್ರಸ್ತ ಬಾಲಕಿಯರು ಬುಧವಾರ ಪ್ರತ್ಯೇಕವಾಗಿ ಎರಡು ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯನ್ನು ಪ್ರತಿನಿಧಿಸುವ ರಾಜ್ಯ ಪ್ರಾಸಿಕ್ಯೂಷನ್, ಖುಲಾಸೆಗೊಂಡಿರುವ ಆರೋಪಿಗಳಾದ ಶಿವಮೂರ್ತಿ ಮುರುಘಾ ಶರಣರು, ಎಸ್ ರಶ್ಮಿ ಮತ್ತು ಎ ಜೆ ಪರಮಶಿವಯ್ಯ ಅವರನ್ನು ಮೇಲ್ಮನವಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಕಳೆದ ನವೆಂಬರ್ 26ರಂದು ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(3), 323, 504, 506, ಪೋಕ್ಸೊ ಕಾಯಿದೆಯ ಸೆಕ್ಷನ್ಗಳಾದ 5(I), 6 ಮತ್ತು 17ರ ಆರೋಪಗಳಿಂದ ಸ್ವಾಮೀಜಿ ಸೇರಿ ಮೂವರನ್ನು ವಿಚಾರಣಾಧೀನ ನ್ಯಾಯಾಲಯ ಖುಲಾಸೆಗೊಳಿಸಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ