ಕರ್ನಾಟಕದಲ್ಲಿ 5 ದಿನ ಭಾರೀ ಚಳಿ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಶೀತಗಾಳಿ ಮುನ್ನೆಚ್ಚರಿಕೆ

ಬೆಂಗಳೂರು: ಡಿಸೆಂಬರ್ 12 ರಿಂದ 16 ರ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4 ° C ನಿಂದ 6 ° C ಇರುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಈ ಪ್ರದೇಶದ ಕೆಲವು ಸ್ಥಳಗಳಲ್ಲಿ ಶೀತ ಗಾಳಿಯಿಂದ ತೀವ್ರ ಶೀತ ಗಾಳಿ ಪರಿಸ್ಥಿತಿ ಉಂಟಾಗುತ್ತದೆ ಎಂದು ತಿಳಿಸಿದೆ. ಡಿಸೆಂಬರ್ 14 ರಿಂದ 16ರ ವರೆಗೆ ಕರಾವಳಿಯಾದ್ಯಂತ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಹೀಗಾಗಿ ಸಾಧ್ಯವಾದಷ್ಟು ಮನೆಯೊಳಗೇ ಇರಲು ಮತ್ತು ಶೀತ ಗಾಳಿಯಿಂದ ದೂರವಿರಲು ಜನರಿಗೆ ಪ್ರಯಾಣ ಕಡಿಮೆ ಮಾಡುವಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement