ಕರ್ನಾಟಕದಲ್ಲಿ ಮುಂದುವರಿಯಲಿದೆ ವಿಪರೀತ ಚಳಿ

ಬೆಂಗಳೂರು : ಕರ್ನಾಟಕದಲ್ಲಿ ವಿಪರೀತ ಚಳಿ ಕಂಡುಬರುತ್ತಿದೆ. ವಿಜಯಪುರದಲ್ಲಿ ಶುಕ್ರವಾರ ರಾಜ್ಯದಲ್ಲೇ ಅತಿ ಕನಿಷ್ಠ ತಾಪಮಾನ 7 ಡಿಗ್ರಿ ಸೆ. ದಾಖಲಾಗಿದೆ. ಭಾನುವಾರ (ಡಿ.14) ಕೂಡ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ ಸೇರಿ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Karnataka Weather) ಯೆಲ್ಲೋ ಅಲರ್ಟ್‌ ನೀಡಿದೆ.
ವಿಶೇಷವಾಗಿ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬೆಳಗಿನ ಜಾವ ತಾಪಮಾನ ತೀವ್ರವಾಗಿ ಇಳಿಕೆಯಾಗಿದ್ದು, ಚಳಿ ಜನರನ್ನು ಗಢಗಢ ನಡುಗಿಸುವಂತಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಈ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಡಿಸೆಂಬರ್‌ 14ರಿಂದ 19ರ ವರೆಗೆ ಕರಾವಳಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 14°C ಇರುವ ಸಾಧ್ಯತೆ ಇದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement