ʼವೋಟ್ ಚೋರಿʼ ; ನಾಳೆ (ಡಿ.14) ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್‌ ರ‍್ಯಾಲಿ

ನವದೆಹಲಿ : ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ `ವೋಟ್ ಚೋರ್ ಗದ್ದಿ ಛೋಡ್ ಮಹಾ ರ‍್ಯಾಲಿ’ ಆಯೋಜಿಸಿದೆ.
ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿಯಾಗಲಿದ್ದಾರೆ.
ರ‍್ಯಾಲಿ ಭಾನುವಾರ ಮಧ್ಯಾಹ್ನ 1:30ಗಂಟೆಯಿಂದ ಆರಂಭವಾಗಿ, ಸಂಜೆಯವರೆಗೆ ನಡೆಯಲಿದೆ. ಕರ್ನಾಟಕದಿಂದ ಸುಮಾರು ನಾಲ್ಕೈದು ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
ದೆಹಲಿ ಪೊಲೀಸ್ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಿದ್ದು, ರಾಮಲೀಲಾ ಮೈದಾನ ಸುತ್ತಮುತ್ತಲಿನ ಸಂಚಾರ ದಟ್ಟಣೆಗೆ ಸಂಬಂಧಿಸಿದಂತೆ ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement