ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಆಟೋ ಮತ್ತು ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ.
ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವಾಹನಗಳನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳದಲ್ಲಿದ್ದ ಕಾರುಗಳು ಮತ್ತು ಆಟೋ ರಿಕ್ಷಾ ಸಂಪೂರ್ಣವಾಗಿ ನಾಶವಾಗಿವೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ.
ವಾಹನಕ್ಕೆ ಅಳವಡಿಸಿದ್ದ ಎಲ್ಪಿಜಿ ಕಿಟ್ ಸ್ಫೋಟಗೊಂಡು ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇದರಿಂದಾಗಿ ಬೆಂಕಿ ಕ್ಷಿಪ್ರವಾಗಿ ಆವರಿಸಿ ಎರಡು ಕಾರುಗಳು ಸುಟ್ಟುಹೋಗಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ಪಡೆದ ತಕ್ಷಣ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ