ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು, ಗುರುವಾರ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ.
ಚಿನ್ನಯ್ಯನಿಗೆ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್ ಆದೇಶದಂತೆ ವೈಯಕ್ತಿಕ ಬಾಂಡ್ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ, ಜಾಮೀನು ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಆತ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿಯೇ ಇದ್ದ.
ಬೆಳ್ತಂಗಡಿ ಜೆಎಂಎಫ್ಸಿ ಕೋರ್ಟ್ ಅದೇಶದ ಹಿನ್ನೆಲೆಯಲ್ಲಿ ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾಗಿದ್ದ. ನಂತರ ಚಿನ್ನಯ್ಯನಿಗೆ ಕಳೆದ ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್, ಇಬ್ಬರು ಸ್ಥಳೀಯರ ಶೂರಿಟಿ ಮೇಲೆ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಜಾಮೀನು ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ನಂತರ ಬುಧವಾರ ಚಿನ್ನಯ್ಯನ ಪತ್ನಿ ಮಲ್ಲಿಕಾ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುಧವಾರ ಬಾಂಡ್, ಇಬ್ಬರು ಸ್ಥಳೀಯರ ಶೂರಿಟಿ ನೀಡಿ ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ಗುರುವಾರ ಬೆಳಗ್ಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ.


ನಿಮ್ಮ ಕಾಮೆಂಟ್ ಬರೆಯಿರಿ