ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆದರೆ ಮಂಕಿಯ ಮಡಿ ಸಮುದ್ರದ ದಡದಿಂದ ಅರಬ್ಬೀ ಸಮುದ್ರದಲ್ಲಿ ಸುಮಾರು 100 ಮೀಟರ್‌ ದೂರ ತೆರಳಿದ್ದ ವೇಳೆ ಬಲವಾದ ಸಮುದ್ರದ ಅಲೆಗಳಿಗೆ ಸಿಲುಕಿ ಅವರ ಪಾತಿ ದೋಣಿ ಮಗುಚಿದೆ. ಇದರಿಂದ ಇವರು ಸಮುದ್ರದಲ್ಲಿ ಮುಳುಗಿದರು. ಅಲೆಯ ರಭಸಕ್ಕೆ ಅವರಿಗೆ ಮೇಲೆ ಬರಲು ಸಾಧ್ಯವಾಗದೆ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಇವರಿಬ್ಬರು ಮಂಕಿಯ ದೇವರಗದ್ದೆಯವರಾಗಿದ್ದಾರೆ. ಈ ಕುರಿತು ಮಂಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement