ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ (Sea Bird) ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ (KA 01 AE 5217) ಸುಗಮವಾಗಿ ಸಂಚರಿಸುತ್ತಿತ್ತು. ಆದರೆ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಕಿಡಿ ಉಂಟಾಗಿ ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಹೊತ್ತಿ ಉರಿದಿದೆ ಎಂದು ಹೇಳಿದ್ದಾರೆ.
 ಚಾಲಕ ಹಾಗೂ ನಿರ್ವಾಹಕ ಸೇರಿ ಸೀಬರ್ಡ್‌ ಬಸ್ಸಿನಲ್ಲಿ 32 ಜನ ಬಸ್ಸಿನಲ್ಲಿದ್ದರು ಎಂದು ಎನ್ನಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement