
ಹುಬ್ಬಳ್ಳಿ: ಹಿರಿಯ ಪತ್ರಕರ್ತ ಹಾಗೂ ಬರಹಗಾರ ಅರುಣಕುಮಾರ ಹಬ್ಬು ಅವರ ಆತ್ಮಕಥನ ” ಬೊಗಸೆ ನೀರು” ಕೃತಿಯು ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ಕೊಡಮಾಡುವ ಬಸವರಾಜ ಕಟ್ಟಿಮನಿ ಆತ್ಮಕಥೆ ಪ್ರಶಸ್ತಿಗೆ ಆಯ್ಕೆಯಾಗಿದೆ.
ಈ ಪ್ರಶಸ್ತಿಯನ್ನು ಜನವರಿ 18ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಪ್ರಶಸ್ತಿಯು 20 ಸಾವಿರ ರೂ ನಗದು ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ.



ನಿಮ್ಮ ಕಾಮೆಂಟ್ ಬರೆಯಿರಿ