ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ ಭಾಗಿ

ನವದೆಹಲಿ/ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಅಧ್ಯಕ್ಷೆ ಬೇಗಂ ಖಲಿದಾ ಜಿಯಾ (80) ಅವರು ಸುದೀರ್ಘ ಅನಾರೋಗ್ಯದ ನಂತರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ ಭಾಗವಹಿಸಲಿದ್ದಾರೆ.
ಡಾ. ಎಸ್. ಜೈಶಂಕರ ಅವರು ಬುಧವಾರ (ಡಿಸೆಂಬರ್ 31, 2025) ಢಾಕಾಗೆ ಭೇಟಿ ನೀಡಿ, ಭಾರತದ ಪರವಾಗಿ ಅಂತಿಮ ಗೌರವ ಸಲ್ಲಿಸಲಿದ್ದಾರೆ.
ಕಳೆದ 36 ದಿನಗಳಿಂದ ಢಾಕಾದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲಿದಾ ಜಿಯಾ (80) ಅವರು, ಹೃದಯ ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕೊನೆಯುಸಿರೆಳೆದರು.

ಸುದೀರ್ಘ ಕಾಲದಿಂದ ಅನಾರೋಗ್ಯ
ಖಲಿದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಮೂತ್ರಪಿಂಡ ಮತ್ತು ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದರು. ಬಾಂಗ್ಲಾದೇಶ ಸೇರಿದಂತೆ ಯುಕೆ, ಯುಎಸ್ ಮತ್ತು ಚೀನಾದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್‌ಗೆ ಕರೆದೊಯ್ಯುವ ಪ್ರಯತ್ನಗಳು ಫಲ ನೀಡಲಿಲ್ಲ.
ಪ್ರಧಾನಿ ಮೋದಿ ಸಂತಾಪ
ಟ್ವಿಟರ್ (X) ಮೂಲಕ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ದೇಶದ ಅಭಿವೃದ್ಧಿ ಹಾಗೂ ಭಾರತ-ಬಾಂಗ್ಲಾ ಸಂಬಂಧ ವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯ. 2015ರಲ್ಲಿ ಅವರೊಂದಿಗೆ ನಡೆಸಿದ ಭೇಟಿಯನ್ನು ನಾನು ನೆನಪಿಸಿಕೊಳ್ಳುತ್ತೇನೆ,” ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement