ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‌ ಪಿಜಿ ಸಿಲಿಂಡರ್‌ ದರದಲ್ಲಿ ಹೆಚ್ಚಳ

2026ರ ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‌ಪಿಜಿ (LPG) ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜನವರಿ 1, 2026 ರಂದು ತೈಲ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಪ್ರಮುಖ ನಗರಗಳಲ್ಲಿ 111 ರೂಪಾಯಿಗಳವರೆಗೆ ಹೆಚ್ಚಿಸಿವೆ. ಆದರೆ, 14 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1795 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿಯೂ 111 ರೂ.ಗಳಷ್ಟು ಏರಿಕೆಯಾಗಿದೆ. ಚೆನ್ನೈನಲ್ಲಿ 1849.50 ರೂ ಮತ್ತು ಬೆಂಗಳೂರಿನಲ್ಲಿ 1,764.50 ರೂ.ಗಳಾಗಲಿದೆ.

ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ದರಗಳು ಸ್ಥಿರವಾಗಿದ್ದು, ಪ್ರಸ್ತುತ ದೆಹಲಿಯಲ್ಲಿ ₹853, ಮುಂಬೈನಲ್ಲಿ ₹852.50, ಬೆಂಗಳೂರಿನಲ್ಲಿ 855.50 ರೂ.ಗೆ ಸಿಗಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ಮತ್ತು ಸಣ್ಣ ಉದ್ದಿಮೆಗಳ ನಿರ್ವಹಣಾ ವೆಚ್ಚ ಹೆಚ್ಚಾಗಲಿದೆ. ಇದು ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಕಾರಣವಾಗಬಹುದು. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಮತ್ತು ದೇಶೀಯ ಉತ್ಪಾದನಾ ವೆಚ್ಚವನ್ನು ಆಧರಿಸಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ದರವನ್ನು ಪರಿಷ್ಕರಿಸುತ್ತವೆ.

ಪ್ರಮುಖ ಸುದ್ದಿ :-   ಪಿಎಫ್‌ಗೆ ಶೇ. 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement