ಬಳ್ಳಾರಿ ಬ್ಯಾನರ್‌ ಗಲಾಟೆ ; ಎಸ್‌ಪಿ ಪವನ್ ನೆಜ್ಜೂರ ಅಮಾನತು

ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗಲಭೆಗೆ (Bellary Clash case) ಸಂಬಂಧಿಸಿ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ.
ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಕಾರಣ ನೀಡಿ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ. ವಿಜಯನಗರ ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದಿತ್ತು. ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ನಡೆದು ವಿಕೋಪಕ್ಕೆ ಹೋಗಿ ಘರ್ಷಣೆ ನಡೆದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು.  ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಮತ್ತು ಹಿರಿಯ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ಸರಿಯಾಗಿ ತಿಳಿಸಲು ವಿಫಲರಾಗಿದ್ದಾರೆ ಎಂದು ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement