ಇನ್ನೆಷ್ಟು ದಿನ ಇರ್ತೀನೋ ಗೊತ್ತಿಲ್ಲ, ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಹಿಂದಿಕ್ಕಿ ಕರ್ನಾಟಕದಲ್ಲಿ “ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ” ವ್ಯಕ್ತಿ ಎಂಬ ದಾಖಲೆ ಸೃಷ್ಟಿಸಿದ ದಿನವೇ, ಸಿದ್ದರಾಮಯ್ಯ ಅವರು ʼಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆʼ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವಿನ ಮುಖ್ಯಮಂತ್ರಿ ಹುದ್ದೆಯ ಸಂಘರ್ಷದ ನಡುವೆ ಈ ಹೇಳಿಕೆ ಮಹತ್ವ ಪಡೆದುಕೊಂಡಿವೆ.
ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,”ಜನರ ಆಶೀರ್ವಾದದಿಂದ ಇಲ್ಲಿವರೆಗೂ ಬಂದಿದ್ದೀನಿ.  ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನಾನು ಮಾಡಿದ ಕೆಲಸದಿಂದ ನನಗೆ ತೃಪ್ತಿ ಇದೆ” ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಎಸ್‌ಸಿಪಿ ಟಿಎಸ್‌ಪಿ ಮಾಡಿದವರು ಯಾರು? ಅನ್ನಭಾಗ್ಯ ಕೊಟ್ಟವರು ಯಾರು? ಕೃಷಿ ಭಾಗ್ಯ ನೀಡಿದವರು ಯಾರು? ರೈತರಿಗೆ ಮನಸ್ವಿನಿ , ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ತಂದವರು ಯಾರು? ಎಂದು ಪ್ರಶ್ನಿಸಿದರು.
“ಹಾವೇರಿಗೆ ನಾನೇ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದೆ. ನಾನೇ ಉದ್ಘಾಟನೆ ಮಾಡುತ್ತಿದ್ದೇನೆ. ಮೆಡಿಕಲ್ ಕಾಲೇಜಿಗೆ ಸುಮಾರು 500 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement