ಬೆಂಗಳೂರು : 16ನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : 16ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (Student suicide in Bengaluru) ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ನಿಕ್ಷೇಪ ಬಂಗೇರಾ ತನ್ನ ತಂದೆ-ತಾಯಿ ಜತೆ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ. ವಿದೇಶದಲ್ಲಿ ಎಂಜಿನಿಯರಿಂಗ್ ಮುಗಿಸಿ ವಾಪಸ್ ಆಗಿದ್ದ ನಿಕ್ಷೇಪ್ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನಾರೋಗ್ಯದಿಂದ ನಿಕ್ಷೇಪ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. .

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement