ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ ಅಪಾರ್ಟ್‌ ಮೆಂಟ್/ ಫ್ಲಾಟ್ ಗಳಿಗೆ ಎ-ಖಾತಾ” ನೀಡಲು ಸಂಪುಟ ಒಪ್ಪಿಗೆ ನೀಡಿದೆ.ಇದರಿಂದಾಗಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದೆ. ರಾಜ್ಯಾದ್ಯಂತ ಸುಮಾರು 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement