ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ.
ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ ಫೈಲ್​ಗಳು ಸಿಐಡಿಗೆ ಹಸ್ತಾಂತರವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬ್ಯಾನರ್​ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ಶಾಸಕ ಗಾಲಿ ಜನಾರ್ದನ ಮನೆ ಮುಂದೆ ಕಳೆದ ಜನವರಿ 1ರಂದು ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತನಿ​​ಗೆ ತಗುಲಿ ಅವರು ಮೃತಪಟ್ಟಿದ್ದರು. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದೆ ಎಂದು ಪೊಲೀಸರು ತಿಳಿಸಿದ್ದರು. ನಂತರ ಈ ಗಲಾಟೆ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಗದ್ದಲಕ್ಕೆ ಕಾರಣವಾಗಿತ್ತು. ಶಾಸಕ ಜನಾರ್ದನ ರೆಡ್ಡಿ ಮತ್ತು ಶಾಸಕ ಭರತ​ ರೆಡ್ಡಿ ಪರಸ್ಪರ ಎರಡು ದೂರು ದಾಖಲಿಸಿದ್ದರು. ಈ ಪ್ರಕರಣ ರಾಜಕೀಯ ತಿರುವು ಪಡೆದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement