ಮೈ ಜುಂ ಎನ್ನುವ ವೀಡಿಯೊ | ಬೆಂಗಳೂರು : ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಹೋಟೆಲ್‌ಗೆ ಗುದ್ದಿದ ಚಾಲಕ ; ತಪ್ಪಿದ ದುರಂತ

ಬೆಂಗಳೂರು: ನಗರದ ಜನನಿಬಿಡ ಪ್ರದೇಶವಾದ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕುಡಿದ ಅಮಲಿನಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ರಾತ್ರಿ ಸುಮಾರು 11:35ರ ವೇಳೆಗೆ ಈ ಘಟನೆ ಸಂಭವಿಸಿದೆ. 42 ವರ್ಷದ ವ್ಯಕ್ತಿಯೊಬ್ಬ ತನ್ನ ಕಾರನ್ನು 18ನೇ ಮುಖ್ಯ ರಸ್ತೆಯಿಂದ 100 ಅಡಿ ರಸ್ತೆಯ ಕಡೆಗೆ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾನೆ.
ತಿರುವಿನಲ್ಲಿ ಕಾರನ್ನು ನಿಯಂತ್ರಿಸಲು ಸಾಧ್ಯವಾಗದೆ ನೇರವಾಗಿ ರಸ್ತೆ ಬದಿಯ ರೆಸ್ಟೋರೆಂಟ್‌ಗೆ ಗುದ್ದಿದ್ದಾನೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿರುವಂತೆ, ಅಪಘಾತ ಸಂಭವಿಸಿದ ಜಾಗದ ಪಕ್ಕದಲ್ಲೇ ಪಾದಚಾರಿಗಳ ಗುಂಪೊಂದು ನಿಂತಿತ್ತು. ಕಾರು ಇವರಿಗೆ ಡಿಕ್ಕಿ ಹೊಡೆಯುವ ಮೊದಲು ತಪ್ಪಿಸಿಕೊಂಡಿದ್ದಾರೆ. ಕಾರು ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಪರೀಕ್ಷಿಸಿದಾಗ, ಆತ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಅಪಘಾತಕ್ಕೀಡಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾಲಕನಿಗೆ  ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ದಸರಾ ಆಯುಧ ಪೂಜೆ ವೇಳೆ ಸೀರೆ ಉಟ್ಟು ಎಕೆ-47ನಿಂದ ಗುಂಡು ಹಾರಿಸಿದ ಮಹಿಳಾ ಐಪಿಎಸ್ ಅಧಿಕಾರಿ; ವಿಡಿಯೋ ವೈರಲ್‌

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement