ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ : ಕೋಡಿಮಠ ಶ್ರೀಗಳಿಂದ ಮತ್ತೆ ಭವಿಷ್ಯ

ರಾಯಚೂರು: ಮುಖ್ಯಮಂತ್ರಿ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವೆ ತಿಕ್ಕಾಟ ನಡೆಯುತ್ತಿರುವ ಬೆನ್ನಲ್ಲೇ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಸಂಬಂಧ ಮತ್ತೊಂದು ಭವಿಷ್ಯ ನುಡಿದಿದ್ದಾರೆ.
ಸೋಮವಾರ ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶ್ರೀಗಳು ಬಜೆಟ್‌ ವರೆಗೂ ಯಾವುದೇ ಬದಲಾವಣೆ ಇಲ್ಲ ಎಂದರು.
ಜ್ಯೋತಿಷ್ಯ ನಂಬುವ ಜನ ಸಂಕ್ರಾಂತಿ, ಯುಗಾದಿ ಎಂದು ಹೇಳುತ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಆಧಾರವಾಗಿಟ್ಟುಕೊಂಡ ಜ್ಯೋತಿಷ್ಯ ಹೇಳುತ್ತಾರೆ. ಆದರೆ ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಮುಂದಿನದನ್ನು ಯುಗಾದಿ ನೋಡಿಕೊಂಡು ಹೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಚಾರವಾಗಿ ಪ್ರತಿಕ್ರಿಯಿಸಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ಆತ ಒಳ್ಳೆಯ ಕಾರ್ಯಕರ್ತ, ಸಂಘಟನೆಯ ಮನುಷ್ಯ, ಹೋರಾಟಗಾರ. ಆದರೆ ಇಲ್ಲಿ ಅದು ಬರುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡ್ತಾರೆಯೇ ? ಇಲ್ಲವೇ? ಎಂಬುದನ್ನು ನೋಡಿ ಹೇಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement