ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ‌ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ ನಡೆದು ಹೋಗುತ್ತಿದ್ದಾಗ ಒಮ್ಮೆಲೆ ಜೇನುಹುಳಗಳು ದಾಳಿ ಮಾಡಿದವು. ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಇವರ ಜೊತೆಗೆ ಇದ್ದ ಇನ್ನಿರ್ವರ ಮೇಲು ಜೇನು ದಾಳಿ ಮಾಡಿದೆ. ಎಲ್ಲರೂ ತಪ್ಪಿಸಿಕೊಳ್ಳಲು ಓಡಿದ್ದಾರೆ. ಆದರೆ ಓಡಲಾಗದೇ ಬಿದ್ದ ಮಂಜುನಾಥ ಅಂಬಿಗ ಅವರ ತಲೆ ಮತ್ತು ಮೈಕೈಗೆ ಜೇನು ಹುಳುಗಳು ಕಡಿದಿವೆ.
ಅಸ್ವಸ್ಥಗೊಂಡ ಅವರನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅಷ್ಟರಲ್ಲೇ ಮೃತ ಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement