ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಎಂದು ಹೇಳಲಾದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋವನ್ನು ಜೆಡಿಎಸ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಡಿಯೊದಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ವ್ಯಕ್ಯಿ ಮಹಿಳಾ ಅಧಿಕಾರಿಯನ್ನು ಅಶ್ಲೀಲವಾಗಿ ನಿಂದಿಸಿ, ಬೆದರಿಕೆ ಹಾಕಿರುವುದು ಕೇಳಿಬರುತ್ತದೆ. ಕೈ ಮುಖಂಡನ ವಿರುದ್ಧ ನಗರಸಭೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರಸಭೆ ಸಿಬ್ಬಂದಿ, ನೌಕರರು ಪ್ರತಿಭಟನೆ ನಡೆಸಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್‌, ಕಾಂಗ್ರೆಸ್‌ ಪಕ್ಷದಿಂದ ರಾಜೀವ್‌ ಗೌಡ ಅವರನ್ನು ವಜಾ ಮಾಡಲು ಆಗ್ರಹಿಸಿದೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್‌ ಅಹ್ಮದ್‌ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಪ್ರಮುಖ ಸುದ್ದಿ :-   ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement