ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಕುಂದಗೋಳ ಪಟ್ಟಣದ ನಿಂಗರಾಜ ಅವಾರಿ (16) ಎಂಬ ವಿದ್ಯಾರ್ಥಿ ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ ಆತನನ್ನು ಮೂವರು ಬಾಲಕರು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮೃತ ವಿದ್ಯಾರ್ಥಿ ಹಾಗೂ ಆತನ ಕೆಲ‌ ಸ್ನೇಹಿತರಿಗೆ ಎರಡು ದಿನದ ಹಿಂದೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿತ್ತು. ಈ ಕಾರಣಕ್ಕೆ ಆತನ ಸಹಪಾಠಿಯೊಬ್ಬ ತನ್ನ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮಾಹಿತಿ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಂದಗೋಳ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement