ಅಸಭ್ಯ ವೀಡಿಯೊ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆಗಿನ ಅಸಭ್ಯ ವೀಡಿಯೊ ವೈರಲ್ ಆದ ನಂತರರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸೋಮವಾರ ಮಧ್ಯಾಹ್ನದ (ಜನವರಿ 19) ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್‌ ಅವರನ್ನು ರಾತ್ರಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರ ರಾವ್​​ ಮಹಿಳೆಯನ್ನು ತಬ್ಬಿಕೊಂಡು ಮುದ್ದಾಡುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯಿಂದ ವರದಿ ಕೇಳಿದ್ದರು. ಆದರೆ ಇದು ನನ್ನ ವಿರುದ್ಧ ಷಡ್ಯಂತ್ರ ನಡೆಸಿ, ನನ್ನ ತೇಜೋವಧೆ ಮಾಡಲು ಪಟ್ಟಭದ್ರ ಹಿತಾಸಕ್ತಿಗಳು ಸೃಷ್ಟಿಸಿದ ಎಐ ವೀಡಿಯೊ ಆಗಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ರಾಮಚಂದ್ರ ರಾವ್ ಆರೋಪ ತಳ್ಳಿಹಾಕಿದ್ದಾರೆ.
ವೈರಲ್‌ ವೀಡಿಯೊವನ್ನು ಯಾವಾಗ ರೆಕಾರ್ಡ್‌ ಮಾಡಲಾಗಿದೆ ಎಂಬುದರ ಬಗ್ಗೆಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ತನಿಖೆಯಿಂದಲೇ ಇದರ ಸತ್ಯಾಸತ್ಯತೆ ಗೊತ್ತಾಗಬೇಕಿದೆ. ತನಿಖೆ ನಡೆಸಿ ವರದಿ ಬಂದ ಬಳಿಕ ಡಿಜಿಪಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement